ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮುರುಘಾ ಶ್ರೀಗಳ ವಿಚಾರಣೆ ಇಂದೂ ಮುಂದುವರೆಯಲಿದ್ದು, ಬೆಳ್ಳಂಬೆಳಗ್ಗೆ ಮುರುಘಾ ಶ್ರೀಗಳ ಆರೋಗ್ಯ ತಪಾಸಣೆ ಮಾಡಲಾಗಿದೆ.
ಇಂದು ಬೆಳಗ್ಗೆ 6 ಗಂಟೆಗೆ ಮುರುಘಾ ಶ್ರೀಗಳಿಗೆ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಬಿಪಿ, ಶುಗರ್ ಎಲ್ಲವೂ ನಾರ್ಮಲ್ ಆಗಿದ್ದು, ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಬಾಲಕಿಯರ ಆರೋಪಕ್ಕೆ ಸಂಬಂಧಿಸಿದಂತೆ, ಕಳೆದ 2 ದಿನಗಳಿಂದ ಶ್ರೀಗಳನ್ನು ವಿಚಾರಣೆಗೊಳಪಡಿಸಲಾಗಿದೆ. ಇನ್ನು ಇವತ್ತು ಕೂಡ ಮುರುಘಾ ಶರಣರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಮಲ್ಲಾಡಿಹಳ್ಳಿ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಶ್ರೀಗಳನ್ನು ವಜಾ ಮಾಡಲಾಗಿದೆ. ಶ್ರೀ ರಾಘವೇಂದ್ರ ಸ್ವಾಮೀಜಿಯವರು ಈ ಸೇವಾಶ್ರಮವನ್ನು ಮುರುಘಾ ಮಠದ ಸುರ್ಪದಿಗೆ ನೀಡಿದ್ದರು. ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವುದಿರಿಂದ, ಅಧ್ಯಕ್ಷ ಸ್ಥಾನದಿಂದ ಶ್ರೀಗಳನ್ನು ವಜಾ ಮಾಡಿ, ಅನಾಥ ಸೇವಾಶ್ರಮ ಟ್ರಸ್ಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.