ಧಾರವಾಡ : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
BIGG NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ, ಜನಜೀವನ ಅಸ್ತವ್ಯಸ್ಥ
ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯ ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ಸೆಪ್ಟೆಂಬರ್ 6 ರ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
BIGG NEWS : `CET RANK’ ರದ್ದು : ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ