ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿದ್ದು, ಈ ಕುರಿತು ಇಂದು ಅವರೇ ತಮ್ಮ ಸ್ಪರ್ಧೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ್ದಾರೆ.
BIGG NEWS: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರಿಕ್ ಆರೋಗ್ಯದಲ್ಲಿ ಚೇತರಿಕೆ
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಹೇಳಿದ ಕಡೆ ನಾನು ಸ್ಪರ್ಧಿಸುತ್ತೇನೆ. ಬಾದಾಮಿ, ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಒತ್ತಾಯ ಮಾಡಿದ್ದಾರೆ. ಅಂತಿಮವಾಗಿ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.