ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ಕಾಲುವೆ ಒತ್ತುವರಿ : ಬೆಂಗಳೂರಿನ ರೈನ್ ಬೋ ಡ್ರೈವ್ ಲೇಔಟ್ ವಿಲ್ಲಾಗಳಿಗೆ ನೋಟಿಸ್