ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ತುಮಕೂರು, ದಾವಣಗೆರೆ ,ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ವಹಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.