ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS: ರಾಯಚೂರಿನಲ್ಲಿ ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಫೋಟೋ ಮಾಯ
ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ರಾಜ್ಯಗಳಿಗೆ ಅಲರ್ಟ್ ಘೋಷಿಸಲಾಗಿದೆ.
ರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟ, ಹಾವೇರಿ, ಗದಗ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕಲ್ಯಾಣ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ, ಕಲಬುರಗಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮಹಾರಾಷ್ಟ್ರದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕೆಳ ಹಂತದ ಐದು ಸೇತುವೆಗಳು ಜಲಾವೃತವಾಗಿದ್ದು, ಸಂಚಾರ ನಿಷೇಧಿಸಲಾಗಿದೆ.