ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ಅನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುವ ಕೆಲಸ ಪ್ರಾರಂಭಿಸಿದೆ ಎಂದು ಹೇಳಿದರು.
ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, ಕ್ರಿಪ್ಟೋಕರೆನ್ಸಿಯನ್ನ ತೆರಿಗೆಯಿಂದ ವಿನಾಯಿತಿ ನೀಡುವ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿದೆ ಎಂದು ಚೌಧರಿ ಸ್ಪಷ್ಟಪಡಿಸಿದರು. ಕ್ರಿಪ್ಟೋಕರೆನ್ಸಿಗಳಿಗೆ ಸಂಬಂಧಿಸಿದ ಸಂಭಾವ್ಯ ಆರ್ಥಿಕ, ಹಣಕಾಸು ಮತ್ತು ಭದ್ರತೆಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಆರ್ಬಿಐ ನಿಯಮಿತವಾಗಿ ಬಳಕೆದಾರರು ಮತ್ತು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡುತ್ತಿದೆ ಎಂದು ಹೇಳಿದರು.