ಚಿತ್ರದುರ್ಗ : ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನಕ್ಕೆ ರಿಹರ್ಸಲ್ ಮಾಡುವಾಗ ಘೋರ ದುರಂತವೊಂದು ಸಂಭವಿಸಿದ್ದು, ಆಕಸ್ಮಿಕವಾಗಿ ನೇಣು ಬಿಗಿದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕೆಳಗೋಟೆ ಬಡಾವಣೆಯಲ್ಲಿ ನಡೆದಿದೆ.
BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು ಗೊತ್ತಾ?
ಚಿತ್ರದುರ್ಗದ ಕೆಳಗೋಟೆ ಬಡಾವಣೆ ನಿವಾಸಿ ಸಂಜಯ್ ಗೌಡ (12) ಮೃತಪಟ್ಟ ಬಾಲಕ, ಎಸ್ ಎಲ್ ವಿ ಶಾಲೆಯ ವಿದ್ಯಾರ್ಥಿಯಾಗಿದ್ದ ಬಾಲಕ ಸಂಜಯ್ ಗೌಡ, ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನಕ್ಕೆ ಸಿದ್ದತೆ ನಡೆಸುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್ ಗೆ ಹಗ್ಗ ಹಾಕಿ, ಮುಖಕ್ಕೆ ಟೋಪಿ ಹಾಕಿಕೊಂಡು ಜಿಗಿದು ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದಾರೆ.