ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮುದ್ದೇಬಿಹಾಳ ಪಟ್ಟಣದಲ್ಲಿ ತಿಪ್ಪಣ್ಣ ಹೊಸಮನಿ (34), ಸುಜಾತ (30) ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಜಾತಳನ್ನು ಪ್ರೀತಿಸಿದ್ದ ತಿಪ್ಪಣ ವರ್ಷದ ಹಿಂದೆ ಮದುವೆ ಆಗಿದ್ದನು. ಆದರೆ ಇದೀಗ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮುದ್ದೆ ಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.