ನವದೆಹಲಿ : ದೆಹಲಿಯಲ್ಲಿ ಶ್ರದ್ಧಾ ವಾಕರ್ ಹತ್ಯೆ ಬೆನ್ನಲ್ಲೇ ಮತ್ತೊಂದು ಘೋರ ಕೃತ್ಯ ಬೆಳಕಿಗೆ ಬಂದಿದೆ. ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ
ದೆಹಲಿಯ ತಿಲಕ್ ನಗರದಲ್ಲಿ 35 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಲಿವ್ ಇನ್ ಪಾರ್ಟ್ನರ್ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಲಾಗಿದೆ. ಮೃತ ಮಹಿಳೆಯನ್ನು ರೇಖಾ ರಾಣಿ ಎಂದು ಗುರುತಿಸಲಾಗಿದ್ದು, ರೇಖಾ ಮುಖವನ್ನು ಕತ್ತರಿಸಿದ ಆಕೆಯ ಪ್ರಿಯಕರ ಮನ್ಪ್ರೀತ್ ಸಿಂಗ್ ಆಕೆಯ ಕತ್ತು ಸೀಳಿ, ಇರಿದು ಕೊಂದಿದ್ದಾನೆ.
ಮನ್ಪ್ರೀತ್ ಸಿಂಗ್ ಕೊಲೆ ನಡೆದ ಸ್ಥಳದಿಂದ ತಪ್ಪಿಸಿಕೊಳ್ಳುವ ಮೊದಲು ರೇಖಾಳನ್ನು ಕೊಂದು ಅವಳ ಮಗಳಿಗೆ ನಿದ್ರೆ ಮಾತ್ರೆಯನ್ನು ನೀಡಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಗಳಲ್ಲಿ ಪಟಿಯಾಲಾದ ಊರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.