ನವದೆಹಲಿ : ಜೂನ್ 9ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ನಾಯಕರಾಗಿ ನೇಮಕಗೊಂಡಿದ್ದ ಕೆ.ಎಲ್.ರಾಹುಲ್ ಗಾಯಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
India captain KL Rahul ruled out of T20 series against South Africa due to injury: BCCI Sources
— Press Trust of India (@PTI_News) June 8, 2022
ಕೆ.ಎಲ್. ರಾಹುಲ್ ಅವರ ಗಾಯವು ಗಂಭೀರವಾಗಿದೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯ ಭಾಗವಾಗುವುದಿಲ್ಲ. ಈ ಸರಣಿಗೆ ರಿಷಭ್ ಪಂತ್ ಅವರನ್ನ ಬಿಸಿಸಿಐ ತಂಡದ ನಾಯಕನನ್ನಾಗಿ ನೇಮಿಸಿದೆ.