ನವದೆಹಲಿ : ಹರಾರೆಯಲ್ಲಿ ಗುರುವಾರದಿಂದ ಆರಂಭವಾಗಲಿರುವ ಜಿಂಬಾಬ್ವೆ ಏಕದಿನ ಪಂದ್ಯಗಳಿಗೆ ವಾಷಿಂಗ್ಟನ್ ಸುಂದರ್ ಬದಲಿಗೆ ಆಲ್ ರೌಂಡರ್ ಶಹಬಾಜ್ ಅಹ್ಮದ್ ಅವ್ರನ್ನ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಮಂಗಳವಾರ ಆಯ್ಕೆ ಮಾಡಿದೆ. ಈ ಬೆಳವಣಿಗೆಯನ್ನ ದೃಢಪಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
“ಇಂಗ್ಲೆಂಡ್ನಲ್ಲಿ ಕೌಂಟಿ ಪಂದ್ಯವನ್ನು ಆಡುವಾಗ ವಾಷಿಂಗ್ಟನ್ ಸುಂದರ್ ಅವರ ಭುಜಕ್ಕೆ ಗಾಯವಾಗಿದೆ. ಅವ್ರು ಜಿಂಬಾಬ್ವೆ ಪ್ರವಾಸದಿಂದ ಹೊರಗುಳಿದಿದ್ದಾರೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
UPDATE – Shahbaz Ahmed replaces injured Washington Sundar for Zimbabwe series.
More details here – https://t.co/Iw3yuLeBYy #ZIMvIND
— BCCI (@BCCI) August 16, 2022
3 ಏಕದಿನ ಪಂದ್ಯಗಳಿಗೆ ಭಾರತ ತಂಡ ಇಂತಿದೆ..!
ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಹರ್, ಶಹಬಾಜ್ ಅಹ್ಮದ್.