ಕೆಎನ್ಎನ್ಡಿಜಿಟಲ್ ಡೆಸ್ಕ್ : ಯುಕೆಯ ಮುಂದಿನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. 185ಕ್ಕೂ ಹೆಚ್ಚು ಸಂಸದರು ರಿಷಿ ಸುನಕ್ ಪರವಾಗಿದ್ದು, ರೇಸ್ನಲ್ಲಿ ಭರ್ಜರಿ ಗೆಲವು ಸಾಧಿಸಿದ್ದಾರೆ.
ಅಂದ್ಹಾಗೆ, ಪ್ರಧಾನಿ ಅಭ್ಯರ್ಥಿ ಪೆನ್ನಿ ಮೊರ್ಡಾಂಟ್ ಟೋರಿ ಸಂಸದರನ್ನ ಬೆಂಬಲಕ್ಕಾಗಿ ಮನವೊಲಿಸಲು ಹೆಣಗಾಡಿದ್ರು. ನಂತ್ರ ಬ್ರಿಟನ್ ನಾಯಕತ್ವ ಸ್ಪರ್ಧೆಯಿಂದ ಪೆನ್ನಿ ಹೊರ ಬಂದರು. ಇನ್ನು ಪ್ರಧಾನಿ ಹುದ್ದೆಗೆ ತಮ್ಮ ಬಿಡ್ ಘೋಷಿಸಬೇಕಿದ್ದ ಬೋರಿಸ್ ಜಾನ್ಸನ್ ಕಳೆದ ರಾತ್ರಿ ಮತ್ತೆ ಸ್ಪರ್ಧೆಯಿಂದ ಹಿಂದೆ ಸರಿದರು.
ಯಾರು ಈ ರಿಷಿ ಸುನಕ್.?
ರಿಷಿ ಸುನಕ್ ಹಣಕಾಸು ಸಚಿವ ಹುದ್ದೆಯಲ್ಲಿದ್ದು, 2015ರಲ್ಲಿ ರಿಷಿ ಬ್ರಿಟನ್ ಸಂಸತ್ತನ್ನ ಪ್ರವೇಶಿಸಿದರು. 2020ರಲ್ಲಿ ಬ್ರಿಟನ್ ಸಚಿವ ಸಂಪುಟದ ಪ್ರಮುಖ ಹುದ್ದೆಗಳಲ್ಲಿ ಒಂದಾದ ಹಣಕಾಸು ಸಚಿವರಾದ್ರು. ಅಂದ್ಹಾಗೆ, ಸುನಕ್ಈ ಹುದ್ದೆಗೇರಿದ ಭಾರತ ಮೂಲದ ಮೊದಲ ವ್ಯಕ್ತಿಯಾಗಿದ್ದಾರೆ.
ವಿಶೇಷವೆಂದ್ರೆ, ಕೋವಿಡ್ 19 ಸಾಂಕ್ರಾಮಿಕದಿಂದ ಬ್ರಿಟನ್ ತತ್ತರಿಸುತ್ತಿದ್ದ ವೇಳೆ ಆರ್ಥಿಕತೆಯನ್ನ ನಿಭಾಯಿಸುವಲ್ಲಿ ರಿಷಿ ಯಶಸ್ವಿಯಾಗಿದ್ದು, ಕೊರೊನಾ ವೇಳೆ ನಷ್ಟದಿಂದ ತತ್ತರಿಸಿದ್ದ ಉದ್ಯಮಗಳಿಗೆ ಅನುಕೂಲಕರವಾದ ಯೋಜನೆಗಳನ್ನ ಜಾರಿಗೆ ತಂದಿದ್ದರು.
ಇನ್ನು ಪ್ರತಿಷ್ಠಿತ ವಿಂಚೆಸ್ಟರ್ ಕಾಲೇಜಿನಲ್ಲಿ ಅಧ್ಯಯನ ನಡೆಸಿರುವ ಸುನಕ್, ಆಕ್ಸ್ಫರ್ಡ್ ವಿವಿಯಲ್ಲಿ ರಾಜಕೀಯ, ಫಿಲಾಸಫಿ ಮತ್ತು ಅರ್ಥಶಾಸ್ತ್ರದಲ್ಲಿ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ. ಅಮೆರಿಕಾ ಸ್ಟಾನ್ಫರ್ಡ್ ವಿವಿಯಿಂದ ಎಂಬಿಎ ಪದವಿಯನ್ನೂ ಪಡೆದುಕೊಂಡಿದ್ದಾರೆ.
ಸುನಕ್ ತಂದೆ ವೈದ್ಯರಾಗಿದ್ದು, ತಾಯಿ ರಾಸಾಯನಿಕ ವಸ್ತುಗಳ ಅಂಗಡಿ ನಡೆಸುತ್ತಿದ್ದರು. ಇನ್ನು ರಿಷಿ ಇನ್ಫೋಸಿಸ್ ನಾರಾಣಮೂರ್ತಿ ಅಳಿಯ. ಹೌದು, ರಿಷಿ ಸುನಾಕ್ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಮಗಳು ಅಕ್ಷತಾರನ್ನ ವಿವಾಹವಾಗಿ ಬ್ರಿಟನ್ನಲ್ಲಿ ನೆಲೆಸಿದ್ದಾರೆ. ಇವರಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಮಕ್ಕಳಿದ್ದಾರೆ.