ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಈ ಪ್ರವಾಸಕ್ಕೆ ಶಿಖರ್ ಧವನ್ ನಾಯಕರನ್ನಾಗಿ ಮಾಡಲಾಗಿದ್ದು, ರವೀಂದ್ರ ಜಡೇಜಾ ಉಪನಾಯಕ ಪಟ್ಟ ಕಟ್ಟಲಾಗಿದೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಸರಣಿಯ ನಂತರ ಭಾರತ ವೆಸ್ಟ್ ಇಂಡೀಸ್‌ಗೆ ಪ್ರವಾಸ ಮಾಡಬೇಕಿದ್ದು, ಅಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

ಬಿಸಿಸಿಐ ಬುಧವಾರ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದರಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಬ್ ಪಂತ್, ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇಂತಿದೆ..!
ಶಿಖರ್ ಧವನ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಸಂಜು ಸ್ಯಾಮ್ಸನ್ (WK) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

Share.
Exit mobile version