ಬೆಂಗಳೂರು : ನೇಕಾರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು, “ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇನ್ನು ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದರು.
ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ ಎಂದ ಸಿಎಂ ಬೊಮ್ಮಾಯಿ, “ಪವರ್ ಲೂಮ್ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುವುದು. ಇನ್ನು ಮನೆಯಲ್ಲೇ ಕೆಲಸ ಮಾಡುವ ನೇಕಾರರು ಗಡಿ ಕೈಗಾರಿಕೆ ವ್ಯಾಪ್ತಿಗೆ ತರಲಾಗುವುದು. ಸಂಘಟಿತ ಕಾರ್ಮಿಕ ನೆರವಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತೆ. ಇನ್ನು ಮುಂದಿನ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುತ್ತೇವೆ” ಎಂದು ಹೇಳಿದರು.