ಬೆಂಗಳೂರು : ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ದೇಶಾದ್ಯಂತ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಫ್ಯಾಕ್ಟರಿ, ಕಚೇರಿಗಳ ಮೇಲೆ ಏಕಕಾಲಕ್ಕೆ 40 ಕ್ಕೂ ಹೆಚ್ಚು ಕಡೆಗಳಲ್ಲಿ 200 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ದೆಹಲಿ, ತಮಿಳುನಾಡು, ಪಂಜಾಬ್ ಸೇರಿದಂತೆ 40 ಕಡೆಗಳಲ್ಲಿ 200 ಕ್ಕೂ ಹೆಚ್ಚು ಐಟಿ ಅಧಿಕಾರಿಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share.
Exit mobile version