ಬೆಳಗಾವಿ: ರಾಜ್ಯದಲ್ಲಿ ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಪ್ರಕರಣ ಸಂಬಂಧ, ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಸೋಮನಗೌಡ ಪಾಟೀಲ್ ಬಂಧಿತ ಆರೋಪಿಯಾಗಿದ್ದು, ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಮೂಲಕ ಕೆಪಿಟಿಸಿಎಲ್ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ.
BIGG NEWS : ರೈತರಿಗೆ ಬಿಗ್ ಶಾಕ್ : ರಸಗೊಬ್ಬರ ಬೆಲೆಯಲ್ಲಿ ಭಾರೀ ಏರಿಕೆ|Fertilizer price hike