ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮತ್ತೆ ಬಸವೇಶ್ವರ ನಗರ ಠಾಣೆಯ ಪೊಲೀಸರು ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನನ್ನು ಬಂಧಿಸಿದ್ದಾರೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆ ಆಗಿದ್ದರು. ಇದೀಗ ಮತ್ತೆ ಬಸವೇಶ್ವರ ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ರಜತ್ ಗೆ ಸೂಚನೆ ನೀಡಿದ್ದಾರೆ. ರಜತ್ ಬಳಸಿದ ಒರಿಜಿನಲ್ ಮಚ್ಚು ಪತ್ತೆಯಾಗದ ಹಿನ್ನೆಲೆ ಮತ್ತೆ ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ತಡೆ ಕಾಯ್ದೆಯಡಿ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.