ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ನಿನ್ನೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
BIGG NEWS : ರಾಜ್ಯದಲ್ಲಿ ಶೀಘ್ರವೇ `ಹೊಸ ಕಾರ್ಮಿಕ ನೀತಿ’ : ಸಚಿವ ಮುರುಗೇಶ್ ನಿರಾಣಿ
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರದ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರವೇ ನಾರಾಯಣಗೌಡ ಬಣದ 8 ರಿಂದ 12 ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿತ್ತು. ಈ ವೇಳೆ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿ ಲಾರಿಗಳ ನಂಬರ್ ಪ್ಲೇಟ್ ಕಿತ್ತು, ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.