ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಮಸಿ ಬಳಿದಿದ್ದಾರೆ.
ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.
ಮಹಾರಾಷ್ಟ್ರದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನಗಳ ಮೇಳೆ ಕರ್ನಾಟಕದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬೂತ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಕಾರ್ಯಕರ್ತರು ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ‘ಜೈ ಮಹಾರಾಷ್ಟ್ರ’ ಘೋಷಣೆಗಳನ್ನು ಸಹ ಬರೆಯಲಾಗಿತ್ತು.