ಬೆಂಗಳೂರು : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮಹಾರಾಷ್ಟ್ರ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಸಿದ್ಧವಾಗಿದೆ. ಬಹಳ ವರ್ಷಗಳ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್ ನಲ್ಲಿ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇನ್ನೂಇಂದು ಬೆಳಗಾವಿ ಭೇಟಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಆದರೆ ಅಂಬೇಡ್ಕರ್ ಪರಿನಿರ್ವಾಣ ಹಿನ್ನೆಲೆಯಲ್ಲಿ ಇಂದು ಭೇಟಿ ರದ್ದು ಮಾಡಿಲ್ಲ. ಬದಲಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ. ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ರಾಜೀ ಮಾಡಿಕೊಳ್ಳುವ ಮಾತೇ ಇಲ್ಲ. ಬೆಳಗಾವಿ ಭೇಟಿ ರದ್ದು ಮಾಡಿಲ್ಲ. ಮುಂದೂಡಿಕೆ ಮಾಡಿದ್ದೇವೆ ಅಷ್ಟೇ. ಶೀಘ್ರವೇ ಬೆಳಗಾವಿಗೆ ಭೇಟಿ ನೀಡುತ್ತೇವೆ ಎಂದು ಹೇಳಿದ್ದಾರೆ.
BREAKING NEWS : ಬೆಳಗಾವಿ ಭೇಟಿ ರದ್ದು ಮಾಡಿಲ್ಲ, ಮುಂದೂಡಿಕೆ ಅಷ್ಟೇ : `ಮಹಾ’ಸಚಿವ ಶಂಭುರಾಜ್ ದೇಸಾಯಿ ಹೇಳಿಕೆ