ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅತಂಕ ಹೆಚ್ಚಾಗಿದ್ದು, ಹೊಸವರ್ಷಾಚರಣೆಗೆ ಮಾಸ್ಕ್ ಕಡ್ಡಾಯ ಮಾಡುವ ವಿಚಾರವಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸವರ್ಷಾಚರಣೆಗೆ ಮಾಸ್ಕ್ ಕಡ್ಡಾಯ ಮಾಡುವ ವಿಚಾರ ಸಂಬಂಧ ಪರಿಸ್ಥಿತಿ ನೋಡಿಕೊಂಡು 3-4 ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಈ ಹಿಂದೆ ನಿತ್ಯ 2 ರಿಂದ 3 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿತ್ತು.ಈಗ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.
BIGG NEWS : ಕೊರೊನಾ ಆತಂಕ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ಸಭೆ, ಹೊಸ ಮಾರ್ಗಸೂಚಿ ಬಿಡುಗಡೆ?