ಮಂಡ್ಯ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜ್ಯಾಧ್ಯಾಂತ ಆಕ್ರೋಶ ಭುಗಿಲೆದ್ದಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದ್ದು, ಬಾಲಕಿಯರ ಸರ್ಕಾರಿ ಕಾಲೇಜಿನಿಂದ ರ್ಯಾಲಿ ಆರಂಭವಾಗಿದ್ದು, ಡಿಸಿ ಕಚೇರಿವರೆಗೂ ನಡೆಯಲಿದೆ. ಇನ್ನು ಈ ಪ್ರತಿಭಟನೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಪ್ರತಿ ತಾಲೂಕಿನಿಂದಲೂ ಬೈಕ್ ರ್ಯಾಲಿಯಲ್ಲಿ ಜನ ಬಂದಿದ್ದಾರೆ.
ಇನ್ನು ಪ್ರತಿಭಟನೆಕಾರರು ಪ್ರವೀಣ್ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದು, ಪಿಎಸ್ಐ, ಎಸ್ಡಿಪಿಐ ಸೇರಿ ದೇಶ ವಿರೋಧಿ ಸಂಘಟನೆ ನಿಷೇಧಕ್ಕೆ ಆಗ್ರಹಿಸಿದ್ದಾರೆ.
ಈ ನಡುವೆ ಬೃಹತ್ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಬಿಸಿ ತಟ್ಟಿದ್ದು, ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ.