ಮಥುರಾ: ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದ ಮೇಲೆ ನಿರ್ಮಿಸಲಾಗಿರುವ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಜನವರಿ 2ರಿಂದ ನಡೆಸಬೇಕೆಂದು ಉತ್ತರ ಪ್ರದೇಶದ ಮಥುರಾ ನ್ಯಾಯಾಲಯ ಆದೇಶಿಸಿದೆ.
ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ದಾವೆಯ ಮೇಲೆ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ. 17 ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಾಲಯದಿಂದ ತೆಗೆದುಹಾಕುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳು ನಡೆಸಿದ ಮೊಕದ್ದಮೆಗಳಲ್ಲಿ ಇದೂ ಒಂದಾಗಿದೆ.
1669-70 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.