ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲಾಗಿದೆ. ಜನಜೀವನ, ವ್ಯಾಪಾರ ವಹಿವಾಟಿಗೆ ತೊಂದರೆ ಆಗದಂತೆ ಕೋವಿಡ್ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತೇವೆ. ಮುನ್ನೆಚ್ಚರಿಕ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.