ಬೆಂಗಳೂರು : ಕಾಂಗ್ರೆಸ್ ನ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಇಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನಿವಾಸಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
BIGG NEWS : `PAYCM’ ಪೋಸ್ಟರ್ ಅಂಟಿಸಿದ ಪ್ರಕರಣ : ಕಾಂಗ್ರೆಸ್ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರಿಂದ `NCR’ ದಾಖಲು
ಇಂದು ಸಚಿವ ಸುಧಾಕರ್ ಅವರ ನಿವಾಸಕ್ಕೆ ಭೇಟಿ ನೀಡಿರುವ ಮುನಿಯಪ್ಪ ಅವರು, ಸುಧಾಕರ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಸದ್ಯ ರಾಜಕೀಯ ವಲಯದಲ್ಲಿ ಸುಧಾಕರ್ ಹಾಗೂ ಮುನಿಯಪ್ಪ ಭೇಟಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮನೆಯ ಸುತ್ತಮುತ್ತ ʻಡೆಂಗ್ಯೂ ಸೊಳ್ಳೆʼ ನಿಯಂತ್ರಿಸಬೇಕೆ ? ಈ ಸರಳ ಸಲಹೆಗಳನ್ನು ಪ್ರಯತ್ನಿಸಿ | Dengue Mosquitoes
ಮಾಜಿ ಸಂಸದ ಮುನಿಯಪ್ಪ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿದ್ದು, ತಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಕೆಲ ದಿನಗಳ ಹಿಂದೆಯೂ ಸಹ ಸಚಿವ ಸುಧಾಕರ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.