ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
BIGG NEWS: ಮುಸ್ಲಿಂರ ವೋಟು ಪಡೆಯೋಕೆ ಕಾಂಗ್ರೆಸ್ ಕೇಸರಿ ವಿರೋಧ ಮಾಡ್ತಿದೆ: ಬಿ.ಸಿ.ನಾಗೇಶ್ ಕಿಡಿ
ತಡರಾತ್ರಿ ತಲಘಟ್ಟಪುರ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ 15 ವರ್ಷದ ಬಾಲಕಿಯನ್ನು ಕಾಮುಕ ವೇಣುಗೋಪಾಲ್ ಎಂಬುವನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೂಲಿ ಕೆಲಸ ಮಾಡುತ್ತಿರುವ ಕುಟಂಬದ ಬಾಲಕಿಯನ್ನು ಕಾಮುಕ ಅತ್ಯಾಚಾರ ಎಸಗಿದ್ದಾನೆ.
ಸದ್ಯ ಕಾಮುಕ ವೇಣುಗೋಪಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.