ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟಿ 20 ಐ ಸರಣಿಯ ಉಳಿದ ಭಾಗವನ್ನು ವೇಗಿ ಜಸ್ಪ್ರೀತ್ ಬುಮ್ರಾ ಕಳೆದುಕೊಳ್ಳಲಿದ್ದಾರೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಖಚಿತಪಡಿಸಿದೆ. ಈ ನಡುವೆ ಟಿ20ಐ ಸರಣಿಗೆ ಬುಮ್ರಾ ಬದಲಿಗೆ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತದ ಅತ್ಯುನ್ನತ ಕ್ರಿಕೆಟ್ ಮಂಡಳಿ ಬಹಿರಂಗಪಡಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡ ಜಸ್ಪ್ರೀತ್ ಬುಮ್ರಾ ಬದಲಿಗೆ ಸಿರಾಜ್ ಆಯ್ಕೆಯಾಗಿದ್ದಾರೆ ಅಂಥ ತಿಳಿಸಿದೆ. ಬೂಮ್ರಾ ಬೆನ್ನುನೋವಿನಿಂದ ಬಳಲುತ್ತಿದ್ದು, ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ಟಿ20ಐಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಹಬಾಜ್ ಅಹ್ಮದ್, ಮೊಹಮ್ಮದ್. ಸಿರಾಜ್ .
🚨 NEWS 🚨: Mohd. Siraj replaces injured Jasprit Bumrah in T20I squad. #TeamIndia | #INDvSA
More Details 🔽https://t.co/o1HvH9XqcI
— BCCI (@BCCI) September 30, 2022