ನವದೆಹಲಿ: ಡ್ರಗ್ಸ್ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಖ್ಯಾತ ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೆಲುಗು ಚಿತ್ರರಂಗದ ಇತರ ಸದಸ್ಯರನ್ನ ಪ್ರಶ್ನಿಸಿದ್ದ ಏಜೆನ್ಸಿ ಇಂದು ನಟಿ ರಾಕುಲ್’ಗೆ ಸಮನ್ಸ್ ನೀಡಿದ್ದು, ಡಿಸೆಂಬರ್ 19ರಂದು ವಿಚಾರಣೆ ಹಾಜರಾಗುವಂತೆ ಸೂಚಿಸಿದೆ.
ಅಂದ್ಹಾಗೆ, ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ರಾಕುಲ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
BIGG NEWS : ಬಿಹಾರದಲ್ಲಿ ಮದ್ಯ ಸೇವಿಸಿ ಸಾವನ್ನಪ್ಪಿದವರಿಗೆ ಪರಿಹಾರ ನೀಡಲ್ಲ : ಸಿಎಂ ನಿತೀಶ್ ಕುಮಾರ್