ಮಡಿಕೇರಿ: ಭಾರೀ ಮಳೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ಕುಸಿಯುವ ಸಾಧ್ಯತೆ ಇರುವುದರಿಂದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್ ಮಾಡಲಾಗಿದೆ.
BIGG NEWS : ಜೋಗ್ ಫಾಲ್ಸ್ ನೋಡಲು ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ಮಡಿಕೇರಿ ನಗರದ ಡಿಸಿ ಕಛೇರಿ ಬಳಿ ತಡೆಗೋಡೆ ಕುಸಿಯುವ ಆತಂಕ ಎದುರಾದ ಹಿನ್ನೆಲೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ನಿನ್ನೆ ರಾತ್ರಿಯಿಂದಲೇ ಸಂಪೂರ್ಣ ಬಂದ್ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಡಿಕೇರಿ ಟೋಲ್ ಗೇಟ್ ಬಳಿಯೇ ಹೆದ್ದಾರಿ ಬಂದ್ ಮಾಡಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಪರಿಣಾಮ ಮಡಿಕೇರಿ ಮತ್ತು ಮಂಗಳೂರು ನಡುವಿನ ಸಂಚಾರ ಸಂಪೂರ್ಣ ಕಡಿತಗೊಂಡಿದೆ.