ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮುರಳಿ ವಿಜಯ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ನಲ್ಲಿ ಪತ್ರವೊಂದನ್ನ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿದ ಆಟಗಾರ, ತಮ್ಮ ಅಭಿಮಾನಿಗಳಿಗೆ ಹಾಗೂ ಟೀಂ ಇಂಡಿಯಾಗೆ ಪತ್ರದಲ್ಲಿ ಧನ್ಯವಾದವನ್ನೂ ತಿಳಿಸಿದ್ದಾರೆ.
@BCCI @TNCACricket @IPL @ChennaiIPL pic.twitter.com/ri8CCPzzWK
— Murali Vijay (@mvj888) January 30, 2023
“ಇಂದು, ಅಪಾರ ಕೃತಜ್ಞತೆ ಮತ್ತು ನಮ್ರತೆಯಿಂದ, ನಾನು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸುತ್ತೇನೆ. 2002 ರಿಂದ 2018 ರವರೆಗಿನ ನನ್ನ ಪ್ರಯಾಣವು ನನ್ನ ಜೀವನದ ಅತ್ಯಂತ ಅದ್ಭುತ ವರ್ಷಗಳಾಗಿವೆ, ಏಕೆಂದರೆ ಇದು ಕ್ರೀಡೆಯ ಅತ್ಯುನ್ನತ ಮಟ್ಟದಲ್ಲಿ ಭಾರತವನ್ನ ಪ್ರತಿನಿಧಿಸುವ ಗೌರವವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ (TNCA), ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಚೆಂಪ್ಲಾಸ್ಟ್ ಸನ್ಮಾರ್ ನನಗೆ ನೀಡಿದ ಅವಕಾಶಗಳಿಗೆ ನಾನು ಕೃತಜ್ಞನಾಗಿದ್ದೇನೆ” ಎಂದಿದ್ದಾರೆ.
ಅಂದ್ಹಾಗೆ, ಭಾರತ ಪರ ಏಕದಿನ ಮಾದರಿಯಲ್ಲಿ ಆಡಲು ವಿಜಯ್ಗೆ ಹೆಚ್ಚಿನ ಅವಕಾಶ ಸಿಗಲಿಲ್ಲ. ಆದರೆ ಅವರು ಟೆಸ್ಟ್ ಮಾದರಿಯ 61 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಅವರು 12 ಶತಕಗಳನ್ನ ಬಾರಿಸಿದ್ದರು. ವಿಜಯ್ ಹೆಸರಿನಲ್ಲಿ ವಿಶೇಷ ದಾಖಲೆ ದಾಖಲಾಗಿದೆ. ಭಾರತ ಪರ ಆಡುತ್ತಿರುವ ಅವರು ಟೆಸ್ಟ್ನಲ್ಲಿ ಚೇತೇಶ್ವರ ಪೂಜಾರ ಅವರೊಂದಿಗೆ ಎರಡನೇ ವಿಕೆಟ್ಗೆ ದೊಡ್ಡ ಜೊತೆಯಾಟವನ್ನ ಆಡಿದ್ದಾರೆ.
ALERT NEWS : ‘ಸೋಶಿಯಲ್ ಮೀಡಿಯಾ’ ಬಳಸುವ ಮುನ್ನ ಎಚ್ಚರ : ‘ವೈರಲ್ ವಿಡಿಯೋ’ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ