ಚಿತ್ರದುರ್ಗ: ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗ ಸಿಟಿ ಸಿವಿಲ್ ಕೋರ್ಟ್ ನ್ಯಾಯಧೀಶರು ಆದೇಶವನ್ನು ಹೊರಡಿಸಿದ್ದಾರೆ.
ಸದ್ಯ ಅವರು ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಅವರ ಬಂಧನದ ಅವಧಿ ಮುಕ್ತಯವಾದ ಹಿನ್ನಲೆಯಲ್ಲಿ ಅವರುನ್ನು ಇಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು, ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ನ್ಯಾಯಾಂಗದ ಅವಧಿಯನ್ನು ಅ.21ರವರೆಗೆ ವಿಸ್ತರಣೆ ಮಾಡಿದರು.