ಹುಬ್ಬಳ್ಳಿ : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೀಡಿರುವ ನಿರ್ಧಾರ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ನ್ಯಾ. ಅಶೋಕ್ ಎಸ್. ಕಿಣಗಿಯರ ಕಚೇರಿಯಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ. ವಾದ-ವಿವಾದ ಆಲಿಸಿ ಹೈಕೋರ್ಟ್ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಿ ತೀರ್ಪು ಪ್ರಕಟಿಸಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.