ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕೇಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, “ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕೇಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಗೀತೆ ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನ ಮೂಡಿಸಬೇಕು” ಎಂದಿದೆ.