ಹಾವೇರಿ : ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ಡನ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಲಿದ್ದು, 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಮಂಡ್ಯದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇಂದು ಹಾವೇರಿಯಲ್ಲಿ ನಡೆಯುತ್ತಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಇಂದು ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ.
ಈ ನಡುವೆ ಇಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರಣಿ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೆಳನ ನಡೆಸಲು ಮನವಿ ಮಾಡಿದ್ದರು.ಆದರೆ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಣಿ ಸಭೆಯಲ್ಲಿ ಹೆಚ್ಚು ಜನರು ಮಂಡ್ಯದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಲು ಬೆಂಬಲ ನೀಡಿದ್ದಾರೆ. ಹೀಗಾಗಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.
Health Tips : ಮಧುಮೇಹ ರೋಗಿಗಳು ಪನ್ನೀರ್ ತಿನ್ನಬಹುದೇ? ಆರೋಗ್ಯ ತಜ್ಞರು ಹೇಳಿದ್ದೇನು? ಇಲ್ಲಿದೆ ಓದಿ