ಮಂಗಳೂರು :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರನ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ, ಪಿಎಫ್ ಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದೆ.
ʻನೆಪ್ಚೂನ್ & ಅದರ ಉಂಗುರʼಗಳ ಸ್ಪಷ್ಟ ಚಿತ್ರ ಸೆರೆಹಿಡಿದ ʻಜೇಮ್ಸ್ ವೆಬ್ʼ ಬಾಹ್ಯಾಕಾಶ ದೂರದರ್ಶಕ… ಫೋಟೋ ನೋಡಿ!
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಇಂದು ಮುಂಜಾನೆ 3.30 ರ ಸುಮಾರಿಗೆ ಎನ್ ಐಎ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ನಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.
BIGG NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಅರ್ಹ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ವಿತರಣೆಗೆ ಸೂಚನೆ
ಪಿಎಸ್ ಐ, ಎಸ್ ಡಿಪಿಐ ಕಚೇರಿಗಳ ಮೇಲೆ ದಾಳಿ ಖಂಡಿಸಿ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾನಿರತರನ್ನುಪೊಲೀಸರು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ಪೊಲೀಸರ ವಿರುದ್ಧ ಪಿಎಫ್ ಐ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮಂಗಳೂರಿನಲ್ಲಿ ಪಿಎಫ್ ಐ, ಎಸ್ ಡಿಪಿಐ ದಾಳಿ ಕುರಿತು ಮಂಗಳೂರಿನ ಕಮಿಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕೆಲವು ಪ್ರಕರಣಗಳ ಸಂಬಂಧ ಎನ್ ಐ ಎ ಟೀಂ ದಾಳಿ ಮಾಡಿದೆ. ಎನ್ ಐಎ ದಾಳಿ ಖಂಡಿಸಿ ಕೆಲವರು ಪ್ರತಿಭಟನೆ ಮಾಡುತ್ತಿದ್ದಾರೆ. ಪೊಲೀಸರ ಮನವಿಗೂ ಬಗ್ಗದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.