ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
BIGG NEWS : ನಾಳೆಯಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ ಆರಂಭ
ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ತುಂಬುತ್ತಾ ಬರಲಾಗಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಅಂತರ ರಾಷ್ಟ್ರೀಯ ಮಾದರಿಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಾದ ಸ್ಥಳ ನಿಗದಿ ಮಾಡಿ, ಶೀಘ್ರದಲ್ಲೇ ಮತ್ತೊಮ್ಮೆ ಕೇಂದ್ರ ಸರ್ಕಾರದೊಡನೆ ಚರ್ಚಿಸಲಾಗುವುದು ಎಂದು ಹೇಳಿದರು.
ರಾಜ್ಯ ಪೊಲೀಸ್ ಇಲಾಖೆ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಹರಿಯಾಣದಲ್ಲಿ ಜರುಗಿದ ಎಲ್ಲಾ ರಾಜ್ಯಗಳ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪೊಲೀಸರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಪೊಲೀಸರಿಗೆ ನೂತನ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುವುದು. ಅಪರಾಧಗಳ ಪತ್ತೆಗಾಗಿ 206 ಸೀನ್ ಆಫ್ ಕ್ರೈಮ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. 9 ಸಂಚಾರಿ ಎಫ್.ಎಸ್.ಎಲ್ ಲ್ಯಾಬ್ಗಳನ್ನು ಮಾಡಲಾಗಿದೆ. ಕಳೆದ ಐದಾರು ತಿಂಗಳಲ್ಲಿ ಹುಬ್ಬಳ್ಳಿ ಮತ್ತು ಬಳ್ಳಾರಿ ನೂತನ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಶಿವಮೊಗ್ಗ ಹಾಗೂ ಹಾಸನದಲ್ಲಿ ಕೂಡ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಮಾಡಲಾಗುವುದು. ಕೇವಲ ನಾಲ್ಕೈದು ತಿಂಗಳೊಳಗೆ ಎಫ್.ಎಸ್.ಎಲ್ ವರದಿ ಬರಬೇಕು. ಇದರಿಂದ ಜಾರ್ಜ್ಶೀಟ್ ಹಾಕಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.
ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಪತ್ತೆಹಚ್ಚಲು ಪೊಲೀಸ್ ಬುನಾದಿ ತರಬೇತಿ ಹಂತದಲ್ಲಿಯೇ ಪಠ್ಯಕ್ರಮ ಅಳವಡಿಸಲಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ತುಂಬುತ್ತಾ ಬರಲಾಗಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು. ರಾಜ್ಯದ ಪೊಲೀಸ್ ನೇಮಕಾತಿ ಇತಿಹಾಸದಲ್ಲಿ ಪಿ.ಎಸ್.ಐ ನೇಮಕಾತಿ ಹಗರಣ ಒಂದು ಕಪ್ಪು ಚುಕ್ಕೆಯಾಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಹಗರಣದಲ್ಲಿ ಭಾಗಿಯಾದ ಐ.ಪಿ.ಎಸ್ನಿಂದ ಪೊಲೀಸ್
ಕಾನ್ಸ್ಟೇಬಲ್ವರೆಗಿನ ಹಲವಾರು ಅಧಿಕಾರಿಗಳನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ. ಪೊಲೀಸ್ ನೇಮಕಾತಿ ಹಗರಣದಿಂದ ಸಾರ್ವಜನಿಕರಲ್ಲಿ ಪೊಲೀಸ್ ವ್ಯವಸ್ಥೆ ಬಗ್ಗೆ ಅಪನಂಬಿಕೆ ಉಂಟಾಗುವುದು. ಪೊಲೀಸರು ತಮ್ಮ ನಡವಳಿಕೆಯಿಂದ ಇಲಾಖೆಯ ಘನತೆ ಹೆಚ್ಚಿಸಬೇಕು. ಇದನ್ನು ಬಿಟ್ಟು ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಬಾರದು. ಪ್ರತಿಭೆ ಹಾಗೂ ಅರ್ಹತೆ ಆಧಾರದ ಮೇಲೆ ಇಲಾಖೆಯಲ್ಲಿ ನೇಮಕಾತಿಯಾಗಬೇಕು. ಪ್ರತಿಭಾವಂತ ಬಡ ಮಕ್ಕಳಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ದೊರೆಯಬೇಕು. ಇದನ್ನು ಬಿಟ್ಟು ಹುದ್ದೆಗಳನ್ನು ಶ್ರೀಮಂತರು ಹಣವುಳ್ಳವರು ಖರೀಧಿಸುವಂತೆ ಆಗಬಾರದು. ಈ ನಿಟ್ಟಿನಲ್ಲಿ ಪೊಲೀಸ್ ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲಾಗುವುದು ಎಂದರು.