ಮುಂಬೈ : ಬಾಲಿವುಡ್ ನಟ ರಣವೀರ್ ಸಿಂಗ್ ಇತ್ತೀಚಿನ ಫೋಟೋಶೂಟ್ʼನಿಂದಾಗಿ ಸಾಕಷ್ಟು ಚರ್ಚೆಯಲ್ಲಿದ್ದಾರೆ. ಆ ಫೋಟೋಶೂಟ್ನಲ್ಲಿ ರಣವೀರ್ ಬಟ್ಟೆ ಇಲ್ಲದೇ ಕಾಣಿಸಿಕೊಂಡಿದ್ದು, ಇದರಿಂದಾಗಿ ಸಾಕಷ್ಟು ಟ್ರೋಲ್ಗೂ ಒಳಗಾಗಿದ್ದಾರೆ. ಸಧ್ಯ ಈ ಫೋಟೋಶೂಟ್ʼನಿಂದಾಗಿ ನಟ ರಣವೀರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು, ರಣವೀರ್ ಕಪೂರ್ ವಿರುದ್ಧ ದೂರು ದಾಖಲಾಗಿದೆ.
ನಗ್ನ ಫೋಟೋಶೂಟ್ ಮಾಡುವ ವಿಷಯದಲ್ಲಿ ಭಾರತೀಯ ಸಂಸ್ಕೃತಿಯನ್ನ ಉಲ್ಲೇಖಿಸಿ, ಎನ್ಜಿಒವೊಂದು ಮುಂಬೈನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ.