ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೆ, ಶಾಸಕ ನಾರಾಯಣಸ್ವಾಮಿ ಸ್ಪೋಟಕ ಸುಳಿವು ನೀಡಿದ್ದು, ಮೇ 15ರ ಒಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ ಅಂತ ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೇ ಎರಡನೇ ವಾರದಲ್ಲಿ ಪುನರ್ ರಚನೆ ಆಗೋ ವಿಶ್ವಾಸ ಇದೆ. ಸರ್ಕಾರಕ್ಕೆ ಮೂರು ವರ್ಷ ಆಗಿದೆ. ಈಗಲೇ ಪುನರ್ ರಚನೆ ಆಗಬೇಕು. ಈಗ ಮಂತ್ರಿ ಮಾಡಿದ್ರೆ ಇನ್ನೊಂದು ವರ್ಷ ಕೆಲಸ ಮಾಡೋಕೆ ಸಮಯ ಸಿಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ವಿಶೇಷ ಮುತುವರ್ಜಿ ವಹಿಸಬೇಕು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಅಗಲೇಬೇಕು ಅಂತ ತಿಳಿಸಿದ್ದಾರೆ.
ಸಂಪುಟ ಪುನರ್ ರಚನೆ ಆಗಲೇಬೇಕು. ದೆಹಲಿಗೆ ಹೋಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ್ವಿ. ಅವರು ನಮಗೆ ಭರವಸೆ ನೀಡಿದ್ದಾರೆ. ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟು ಹೊಸಬರನ್ನು ಸೇರಿಸಬೇಕು. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆ ಆಗಲೇಬೇಕು. ಮಂತ್ರಿ ಸ್ಥಾನ ಕೇಳೋದು ನಮ್ಮ ಹಕ್ಕು. ಸಂಪುಟ ಪುನರ್ ರಚನೆ ಆಗುತ್ತದೆ ಅಂತ ನಮಗೆ ವಿಶ್ವಾಸ ಇದೆ. ಮೇ 15ರ ಒಳಗೆ ಶುಭ ಸುದ್ದಿ ಬರಲಿದೆ ಎಂದಿದ್ದಾರೆ.








