ದಾವಣಗೆರೆ : ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ತುಂಗಾಭದ್ರಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಕೂಟದಲ್ಲಿ ಚಿನ್ನ ಗೆದ್ದ ʻ 94 ವರ್ಷದ ಭಗ್ವಾನಿ ದೇವಿ ದಾಗರ್ ʼ | Watch video
ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೊನ್ನಾಳಿ ತಾಲೂಕಿನ 31, ಹರಿಹರ ತಾಲೂಕಿನ 14 ಹಳ್ಳಿಗಳಲ್ಲಿ ಪ್ರವಾಹ ಭೀತಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಇರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಪ್ರವಾಹ ಭೀತಿ ಇರುವ 50 ಕ್ಕೂ ಹೆಚ್ಚು ಗ್ರಾಮಗಳ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ಸೂಚನೆ ನೀಡಿದ್ದು, ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 10 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ.
BREAKING NEWS: PSI ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಕೇಸ್: ಮಧ್ಯವರ್ತಿ ಆಗಿದ್ದ ಮತ್ತೊಬ್ಬ ಪಿಎಸ್ಐ ಅರೆಸ್ಟ್