ಪೇಶಾವರ : ವಾಯವ್ಯ ಪಾಕಿಸ್ತಾನದ ತಾಲಿಬಾನ್ ವಿರೋಧಿ ಗ್ರಾಮದ ವೃದ್ಧರೊಬ್ಬರ ವಾಹನವನ್ನ ಗುರಿಯಾಗಿಸಿಕೊಂಡು ರಸ್ತೆ ಬದಿಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ವಾತ್ ಜಿಲ್ಲೆಯ ಕಬಾಲ್ ತಹಸಿಲ್ನ ಶಾಂತಿ ಸಮಿತಿಯ ಮುಖ್ಯಸ್ಥ ಇದ್ರಿಸ್ ಖಾನ್ ಈ ಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಯೀದ್ ಖಾನ್ ತಿಳಿಸಿದ್ದಾರೆ. ಅದೇ ಸಮಯದಲ್ಲಿ, ರಸ್ತೆ ಬದಿಯ ಬಾಂಬ್ ಸ್ಫೋಟಗೊಂಡಿದ್ದು, ಅದರಲ್ಲಿ ಆತ ಮೃತಪಟ್ಟಿದ್ದಾನೆ. ಇನ್ನು ಈ ಬಾಂಬ್ ಸ್ಫೋಟದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿದ್ದವು. ಆದ್ರೆ, ನಂತರ ಇಬ್ಬರು ಪೊಲೀಸರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ ಎಂದು ಅವ್ರು ಹೇಳಿದರು.
ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ ಎಂದು ಕರೆಯಲ್ಪಡುವ ಪಾಕಿಸ್ತಾನಿ ತಾಲಿಬಾನ್ ಉಗ್ರಗಾಮಿ ಗುಂಪಿನ ವಕ್ತಾರ ಮೊಹಮ್ಮದ್ ಖುರಾಸಾನಿ ಅವರು ಈ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ ಎಂದು ಎಪಿ ವರದಿ ಮಾಡಿದೆ. ಹತ್ಯೆಗೀಡಾದ ಶಾಂತಿ ಸಮಿತಿಯ ಮುಖ್ಯಸ್ಥರು ಕಳೆದ ಹಲವಾರು ವರ್ಷಗಳಿಂದ ಭದ್ರತಾ ಪಡೆಗಳನ್ನು ಬೆಂಬಲಿಸುತ್ತಿದ್ದರು ಎಂದು ಖುರಾಸಾನಿ ಹೇಳಿದರು.