ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ರಾಜ್ಯದ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬೆಳ್ಳಂಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಪೊಲೀಸರು ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಮಂದಿ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಜಮಖಂಡಿ, ಇಳಕಲ್ ಹಾಗೂ ಬಹನಹಟ್ಟಿ ಠಾಣೆ ಪೊಲೀಸರು ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.