ನವದೆಹಲಿ : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt
ಉಮೇಶ್ ಕತ್ತಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಚಿವ ಉಮೇಶ್ ಕತ್ತಿ ನಿಧನದಿಂದ ಬಹಳ ನೋವಾಗಿದೆ. ಕರ್ನಾಟಕದ ಅಭಿವೃದ್ಧಿಗೆ ಉಮೇಶ್ ಕತ್ತಿ ತುಂಬಾ ಕೊಡುಗೆ ನೀಡಿದ್ದರು, ಉಮೇಶ್ ಕತ್ತಿ ಅನುಭವಿ ನಾಯಕರಾಗಿದ್ದರು. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi) September 7, 2022
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.