ನವದೆಹಲಿ ; ಅಕ್ಟೋಬರ್ 18ರಂದು ಮಧ್ಯಾಹ್ನ 1:45ಕ್ಕೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 90ನೇ ಇಂಟರ್ ಪೋಲ್ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಕ್ಟೋಬರ್ 18 ರಿಂದ 21 ರವರೆಗೆ ಇಂಟರ್ ಪೋಲ್’ನ 90ನೇ ಸಾಮಾನ್ಯ ಸಭೆ ನಡೆಯಲಿದೆ. ಸಚಿವರು, ದೇಶಗಳ ಪೊಲೀಸ್ ಮುಖ್ಯಸ್ಥರು, ರಾಷ್ಟ್ರೀಯ ಕೇಂದ್ರೀಯ ಬ್ಯೂರೋಗಳ ಮುಖ್ಯಸ್ಥರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ 195 ಇಂಟರ್ ಪೋಲ್ ಸದಸ್ಯ ರಾಷ್ಟ್ರಗಳ ನಿಯೋಗಗಳು ಸಭೆಯಲ್ಲಿ ಭಾಗವಹಿಸಲಿವೆ. ಸಾಮಾನ್ಯ ಸಭೆಯು INTERPOOLನ ಸರ್ವೋಚ್ಚ ಆಡಳಿತ ಮಂಡಳಿಯಾಗಿದೆ ಮತ್ತು ಅದರ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ವರ್ಷಕ್ಕೊಮ್ಮೆ ಸಭೆ ಸೇರುತ್ತದೆ.
ಸುಮಾರು 25 ವರ್ಷಗಳ ಅಂತರದ ನಂತರ ಇಂಟರ್ ಪೋಲ್ ಸಾಮಾನ್ಯ ಸಭೆಯು ಭಾರತದಲ್ಲಿ ನಡೆಯುತ್ತಿದೆ – ಇದು ಕೊನೆಯ ಬಾರಿಗೆ 1997 ರಲ್ಲಿ ನಡೆಯಿತು. ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ 2022ರಲ್ಲಿ ನವದೆಹಲಿಯಲ್ಲಿ ಇಂಟರ್ಪೋಲ್ ಸಾಮಾನ್ಯ ಸಭೆಯನ್ನು ಆಯೋಜಿಸುವ ಭಾರತದ ಪ್ರಸ್ತಾಪವನ್ನ ಸಾಮಾನ್ಯ ಸಭೆಯು ಪ್ರಚಂಡ ಬಹುಮತದೊಂದಿಗೆ ಅಂಗೀಕರಿಸಿತು. ಈ ಕಾರ್ಯಕ್ರಮವು ಭಾರತದ ಕಾನೂನು ಮತ್ತು ಸುವ್ಯವಸ್ಥೆ ವ್ಯವಸ್ಥೆಯಲ್ಲಿನ ಅತ್ಯುತ್ತಮ ಅಭ್ಯಾಸಗಳನ್ನು ಇಡೀ ವಿಶ್ವಕ್ಕೆ ಪ್ರದರ್ಶಿಸುವ ಅವಕಾಶವನ್ನ