ಕೆಎನ್ಎನ್ಡಿಜಿಟಲ್ ಡೆಸ್ಕ್ : ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನ ನೀಡಲಾಗುತ್ತಿದೆ ಎಂದು ಆರೋಪಿಸಿ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಅಡುಗೆ ಮನೆಯ ನೌಕರನಿಗೆ ಕಪಾಳಮೋಕ್ಷ ಮಾಡಿದ್ದಾರೆ.
ಸೋಮವಾರ ನಡೆದ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಂಗಾರ್ ಆಹಾರದ ಬಗ್ಗೆ ಪ್ರಶ್ನಿಸುವಾಗ ಉದ್ಯೋಗಿಯನ್ನ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ಯೋಜನೆಯ ಆಹಾರವನ್ನ ಕಳಪೆ ಗುಣಮಟ್ಟದ ವಸ್ತುಗಳಿಂದ ಅಡುಗೆಮನೆಯಲ್ಲಿ ತಯಾರಿಸಲಾಗಿದೆ ಎಂದು ಬಂಗಾರ್ ನಂತರ ಸುದ್ದಿಗಾರರಿಗೆ ತಿಳಿಸಿದರು. “ಇದು ಸರ್ಕಾರದ (ನಿಧಿ) ಲೂಟಿಯಾಗಿದೆ. ಅವರು ಬಡ ಜನರ ಜೀವನದೊಂದಿಗೆ ಆಟವಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣದ ಭಾಗವಾಗಿರುವ ಶಿವಸೇನೆ ಶಾಸಕ ಹೇಳಿದ್ದಾರೆ.