ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಸಿಎಂ ಜೊತೆಗಿನ ಸಭೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು “ಪ್ರಕರಣದ ಕುರಿತು ಸಿಎಂ ಜೊತೆ ಮಾತನಾಡಿದ್ದೇವೆ. ಪ್ರವೀಣ್ ಸೂದ್ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಇನ್ನು ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 10 ಮಂದಿ ವಶಕ್ಕೆ ಪಡೆಯಲಾಗಿದೆ. ಪೊಲೀಸರು ತುಂಬಾನೇ ಚುರುಕಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ನಮ್ಮ ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ರೆ, ಪ್ರಕರಣವನ್ನ ಎನ್ಐಎಗೆ ಒಪ್ಪಿಸಲು ಸಿದ್ದರಿದ್ದೇವೆ” ಎಂದರು.
ಅಂದ್ಹಾಗೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ನಂತ್ರ ಬೆಳ್ಳಾರೆ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಇನ್ನು ಪರಿಸ್ಥಿತಿ ಮತ್ತಷ್ಟು ಬಿಗಾಡಿಸುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದರು.