ನವದೆಹಲಿ : ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.
ಇನ್ನು ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜಾಗಿರುವ ಅಶೋಕ್ ಗೆಹ್ಲೋಟ್ ಗೆದ್ದರೆ ಎರಡು ಸ್ಥಾನಗಳನ್ನ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಇಂದು ಬಲವಾಗಿ ಸೂಚಿಸಿದ್ದಾರೆ. ಹಾಗಾಗಿ ಅವರ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವ್ರಿಗೆ ರಾಜಸ್ಥಾನ ಮುಖ್ಯಮಂತ್ರಿ ಜವಾಬ್ದಾರಿ ವಹಿಸಬೋದು ಎಂದು ಮೂಲಗಳು ತಿಳಿಸಿವೆ.
ಕೇರಳದಲ್ಲಿ ಮಾತನಾಡಿದ ರಾಹುಲ್ ಗಾಂಧಿ “ನಾವು ಉದಯಪುರದಲ್ಲಿ ಬದ್ಧತೆಯನ್ನ ಮಾಡಿದ್ದೇವೆ, ಬದ್ಧತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ನಾನು ಭಾವಿಸುತ್ತೇನೆ. ಒಂದು ವ್ಯಕ್ತಿ, ಒಂದು ಹುದ್ದೆ ನಿಯಮದ ಬಗ್ಗೆ ಮತ್ತು ಅದು ಅಶೋಕ್ ಗೆಹ್ಲೋಟ್ ಅವರಿಗೆ ಅನ್ವಯಿಸುತ್ತದೆಯೇ” ಎಂಬುದರ ಬಗ್ಗೆ ಸುದ್ದಿಗಾರರಿಗೆ ತಿಳಿಸಿದರು.