ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟ್ ತಾರೆ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಆಸ್ಪತ್ರೆಗೆ ಏರ್ಲಿಫ್ಟ್ ಮಾಡಲಾಗುತ್ತಿದೆ ಅಂತ ತಿಳಿದು ಬಂದಿದೆ.
ರಿಷಬ್ ಪಂತ್ ಅವರು ಜೀವನ ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ನವದೆಹಲಿಯಿಂದ ತಮ್ಮ ಊರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಷಬ್ ಪಂತ್ ಅವರು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಕಾರು ಸಂಪೂರ್ಣವಾಗಿ ಬೆಂಕಿಗೆ ಅಹುತಿಯಾಗಿದೆ. ಇದೇ ವೇಳೆ ಅವರನ್ನು ಸ್ತಳೀಯ ಜನರು ಜನರು ಕಾಪಾಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.