ನವದೆಹಲಿ : ಗಾಯದ ಸಮಸ್ಯೆಯಿಂದಾಗಿ ನಾಯಕ ರೋಹಿತ್ ಶರ್ಮಾ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ಮೊದಲ ಪಂದ್ಯವನ್ನ ಮುನ್ನಡೆಸಲಿದ್ದಾರೆ. ಇನ್ನು ರೋಹಿತ್ ಬದಲಿಗೆ ಅಭಿಮನ್ಯು ಈಶ್ವರನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅವರೊಂದಿಗೆ ಸೌರಭ್ ಕುಮಾರ್ ಮತ್ತು ನವದೀಪ್ ಸೈನಿ ಕೂಡ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಅವರನ್ನೂ ಕೈಬಿಡಲಾಗಿದೆ. ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನ ನೀಡಿದೆ.
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ವೇಳೆ ಟೀಂ ಇಂಡಿಯಾ ನಾಯಕ ರೋಹಿತ್ ಗಾಯಗೊಂಡಿದ್ದರು. ಇದರಿಂದಾಗಿ ಅವರು ಭಾರತಕ್ಕೆ ಮರಳಿದರು. ಈ ಕಾರಣಕ್ಕೆ ಅವರಿಗೆ ಮೊದಲ ಟೆಸ್ಟ್ನಿಂದ ವಿಶ್ರಾಂತಿ ನೀಡಲಾಗಿದೆ. ಅವರು ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಆದರೆ ಎರಡನೇ ಟೆಸ್ಟ್ ಪಂದ್ಯದ ಮಾಹಿತಿ ಇನ್ನೂ ಬಂದಿಲ್ಲ.
ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ ಭುಜ ಮತ್ತು ಮೊಣಕಾಲು ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಮತ್ತು ಈ ಕಾರಣಕ್ಕಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಆಯ್ಕೆಗಾರರು ಶಮಿ ಮತ್ತು ಜಡೇಜಾ ಬದಲಿಗೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ಆಯ್ಕೆ ಮಾಡಿದ್ದಾರೆ. ಟೆಸ್ಟ್ ಸರಣಿಗಾಗಿ ಭಾರತ ತಂಡದಲ್ಲಿ ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ಆಯ್ಕೆ ಸಮಿತಿ ಸೇರಿಸಿದೆ.
ಬಾಂಗ್ಲಾದೇಶ ವಿರುದ್ಧದ ಭಾರತ ಟೆಸ್ಟ್ ತಂಡ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್