ಮುಂಬೈ: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ ಪ್ರಕಟಿಸಿದೆ. ಆತಿಥೇಯ ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು 0-2 ರಿಂದ ಕಳೆದುಕೊಂಡಿದೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ 2ನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಎರಡನೇ ಓವರ್ನಲ್ಲಿ ಹೆಬ್ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ವೈದ್ಯಕೀಯ ಸಮಲೋಚನೆ ಮಾಡಿದ ಬಳಿಕ ಅವರು, ಭಾರತಕ್ಕೆ ವಾಪಸ್ಸು ಆಗಿದ್ದಾರೆ. ಈ ಮೂಲಕ ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಮುಂಬರುವ ಟೆಸ್ಟ್ ಸರಣಿಗೆ ಅವರ ಲಭ್ಯತೆಯ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.